खबर / पोस्ट / जानकारी / विज्ञापन
दिनांक : 📅 1095740 - 8 - खेल दिवस |
| 2026-01-19 |
👁️ 4306 |
ಟೋ ಶಿರ್ಷಿಕೆ
==========
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ರವಿವಾರದಂದು ನೌಬಾದನ ಸರ್ಕಾರಿ ಪ್ರಥಮ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
===============
ಬೀದರ, ಜನವರಿ.19 (ಕರ್ನಾಟಕ ವಾರ್ತೆ):- 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ )01-01-2024 ರಿಂದ 31-12-2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳುಗೆ ಅರ್ಜಿಗಳನ್ನು ಅಧಿಕೃತ ಜಾಲತಾನ https://sevasindhu.karnataka.gov.in ಮೂಲಕ ದಿನಾಂಕ: 31-01-2026 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
*****
ಸಹಾಯಕ ನಿರ್ದೇಶಕರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಬೀದರ
office: 08482-225370
खबर कि अन्य लिंक :